Wednesday, April 24, 2024
Homeಸುದ್ದಿರಾಜ್ಯಕಾಂಗ್ರೆಸ್‌‌ನ ಮೊದಲ ಗ್ಯಾರಂಟಿ ಜಾರಿ - ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಕಾಂಗ್ರೆಸ್‌‌ನ ಮೊದಲ ಗ್ಯಾರಂಟಿ ಜಾರಿ – ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು : ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್, ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸಭೆ ನಡೆಸಿ ಸುಧೀರ್ಘ ಚರ್ಚೆ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್, ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News