Tuesday, April 23, 2024
Homeಸುದ್ದಿಕರಾವಳಿ5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್ ಗಳೇನು? ಇಲ್ಲಿದೆ ವಿವರ

5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್ ಗಳೇನು? ಇಲ್ಲಿದೆ ವಿವರ

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.

ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್ ಯೋಜನೆಯ ಸಂಪೂರ್ಣ ವಿವರ ನೀಡಿದರು.

200 ಯುನಿಟ್ವರೆಗು ಉಚಿತ ವಿದ್ಯುತ್

ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೆ ಅವರು ಬಿಲ್ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು.  12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್ ಬಿಲ್ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್ ನೀಡುತ್ತೇವೆ. 200 ಯೂನಿಟ್ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್ 1ರವರೆಗೆ ಬಳಸುವ ವಿದ್ಯುತ್ ಬಳಕೆಗೆ ಬಿಲ್  ಎಂದು ತಿಳಿಸಿದರು.

ಮನೆ ಯಜಮಾನಿ ಅಕೌಂಟ್ಗೆ 2000 ಸಾವಿರ ಜಮಾ

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತವೇ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಕಾಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ಬುಕ್ ಜೆರಾಕ್ಸ್ ನೀಡಬೇಕು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮನೆ ಯಜಮಾನಿಗೆ ತಿಂಗಳಿಗೆ 2000 ರೂ. ಜಮಾ ಮಾಡುತ್ತೇವೆ. ಹಾಗಾಗಿ ಈಗ ಅವರು ಅಕೌಂಟ್ ನಂಬರ್, ಆಧಾರ್ ಕಾರ್ಡ್ ಕೊಡಬೇಕು. ಅಲ್ಲದೇ ಇದಕ್ಕೆ ಆನ್ಲೈನ್ ಅರ್ಜಿ ಸಲ್ಲಿಸಬೇಕು. ಜೂನ್ 15ರಿಂದ ಜುಲೈ 15ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ದಾಖಲೆಗಳನ್ನು ಪರಿಶೀಲಿಸಿ ಆಗಸ್ಟ್ 15ರಿಂದ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ಹಣ ಹಾಕಲಾಗುವುದು. ಇದು ಬಿಪಿಎಲ್ ಹಾಗೂ ಎಪಿಲ್ ಕಾರ್ಡುದಾರರಿಗೆ ಅನ್ವಯವಾಗಲಿದೆ ಎಂದರು.

ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವೀಕಲಕರಿಗೆ ಈಗಾಲೇ ಬರುತ್ತಿರುವ ಪಿಂಚಣಿ ಜೊತೆಗೆ ಈ ಎರಡು ಸಾವಿರ ರೂಪಾಯಿ ಮನೆ ಯಜಮಾನಿಗೆ ಸಿಗಲಿದೆ.

ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ

ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ

ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್ನಲ್ಲಿ ಸಂಚರಿಸಬಹುದಾಗಿದೆ. ಆದರೆ ರಾಜ್ಯದ ಒಳಗೆ ಮಾತ್ರ. ಆದರೆ ಎಸಿ ಮತ್ತು ಲಗ್ಜುರಿ ಬಸ್ಗಳು ಹೊರತುಪಡಿಸಿ ಈ ತಿಂಗಳು 11ನೇ ತಾರಿಕಿನಿಂದ ಸಂಚರಿಸಬಹುದು.

ಉಚಿತ ಬಸ್ ಯೋಜನೆ ಅಡಿಯಲ್ಲಿ ಎಲ್ಲಾ ಅಂದರೆ ವಿದ್ಯಾರ್ಥಿನಿಯರು ಸೇರಿದಂತೆ ಮಹಿಳೆರಿಗೆ ಜೂನ್ 11ರಿಂದ ಉಚಿತ ಬಸ್ ಪ್ರಯಾಣ ಮಾಡಬಹುದು. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ಇನ್ನುಳಿದಂತೆ ರಾಜಹಂಸ,  ಕೆಎಸ್ಆರ್ಟಿಸಿಯ ಎಲ್ಲಾ ಎಕ್ಸ್ಪ್ರೆಸ್, ಬಿಎಂಟಿಸಿ ಬಸ್ಗಳಲ್ಲಿ ಕರ್ನಾಟಕದೊಳಗೆ ಪ್ರಯಾಣಿಸಬಹುದು.

 ಯುವ ನಿಧಿ

2022-23ರ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಉತ್ತೀರ್ಣರಾಗಿ ನಿರುದ್ಯೋಗಿಗಳಾಗಿದ್ದರೆ ಅಂತವರಿಗೆ ‘ಯುವನಿಧಿ’ ಯೋಜನೆ ಅಡಿಯಲ್ಲಿ ತಿಂಗಳಿಗೆ 3000 ರೂ. ನೀಡಲಾಗುತ್ತದೆ. ಬಿಎ, ಬಿಎಸ್ಸಿಸ, ಬಿಕಾಂ ಪದವೀಧರ ನಿರುದ್ಯೋಗಿಗಳಿಗೆ ಇದರ ಲಾಭ ಸಿಗಲಿದೆ.

2022-23ರ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಉತ್ತೀರ್ಣರಾಗಿ ನಿರುದ್ಯೋಗಿಗಳಾಗಿದ್ದರೆ ಅಂತವರಿಗೆ ‘ಯುವನಿಧಿ’ ಯೋಜನೆ ಅಡಿಯಲ್ಲಿ ತಿಂಗಳಿಗೆ 3000 ರೂ. ನೀಡಲಾಗುತ್ತದೆ. ಬಿಎ, ಬಿಎಸ್ಸಿಸ, ಬಿಕಾಂ ಪದವೀಧರ 18ರಿಂದ 25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಯುವನಿಧಿ ಲಾಭ ಸಿಗಲಿದೆ.

2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿರುವ ಎಲ್ಲಾ ಪದವೀಧರರಿಗೆ 24 ತಿಂಗಳವರೆಗೆ ಪ್ರತಿ ತಿಂಗಳು 3000 ರೂ.ಡಿಪ್ಲೋಮಾ ಹೋಲ್ಡರ್ಸ್ ಗೆ 1500 ಪಾವತಿ ಮಾಡಲಾಗುತ್ತದೆ. 24 ತಿಂಗಳ ಒಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಆಗ ಹಣ ಪಾವತಿ‌ ಇಲ್ಲ. ನಿರುದ್ಯೋಗಿ ಎಂದು ಅರ್ಜಿ ಹಾಕಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಹಣ ಸಿಗಲಿದೆ . ನೋಂದಣಿ ಮಾಡಿಕೊಂಡ 24 ತಿಂಗಳವರೆಗೆ ಪಾವತಿ ಮಾಡಲಾಗುತ್ತಿದ್ದು, ಟ್ರಾನ್ಸ್ ಜೆಂಡರ್ಸ್ ಗೆ ಕೂಡಾ ಯುವ ನಿಧಿ ಅನ್ವಯವಾಗಲಿದೆ. ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

  • ಪದವಿ, ಸ್ನಾತಕೋತ್ತರ ಪದವೀಧರರಿಗೆ ‘ಯುವನಿಧಿ’ ಯೋಜನೆ
  • ಪದವಿ ಪಡೆದ ನಂತರ ನೋಂದಾಯಿಸಿಕೊಂಡವರಿಗೆ ಯೋಜನೆ
  • 24 ತಿಂಗಳು ಮಾಸಿಕ 3 ಸಾವಿರ ರೂಪಾಯಿ ನೀಡುತ್ತೇವೆ
  • 2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’
  • ನಿರುದ್ಯೋಗ ಪದವೀಧರರಿಗೆ ಮಾಸಿಕ 3 ಸಾವಿರ ರೂ. ನೀಡಲಾಗುತ್ತದೆ.
  • ಡಿಪ್ಲೋಮಾ ಪದವೀಧರರಿಗೆ ಮಾಸಿಕ 1,500 ರೂ.
  • ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರಿಗೂ ‘ಯುವನಿಧಿ’ ಲಾಭ
  • 18ರಿಂದ 25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಯುವನಿಧಿ’ ಜಾರಿ
  • ಯುವ ನಿಧಿ ಅರ್ಜಿ ಸಲ್ಲಿಕೆಗೆ ಅರ್ಜಿ ಕರೆದ 6 ತಿಂಗಳವರೆಗೆ ಅವಕಾಶ
  • ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸುತ್ತಿದ್ದೇವೆ
  • 24 ತಿಂಗಳೊಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಇಲ್ಲ
  • ಅಂಥವರಿಗೆ ಯುವನಿಧಿ ಯೋಜನೆ ಹಣ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News