Monday, April 22, 2024
Homeಸುದ್ದಿರಾಜ್ಯ'ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ' - ಸಿಎಂ

‘ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ’ – ಸಿಎಂ

ಬೆಂಗಳೂರು : ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ- ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದ್ದು, ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದರು.

ಇನ್ನು ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದು, ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News