Saturday, April 20, 2024
Homeಸುದ್ದಿ'ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ'- ಸಿಎಂ ಸಿದ್ದರಾಮಯ್ಯ

‘ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ’- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಜೂ 05: ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ, ಹಣಕಾಸು ಇಲಾಖೆ ಸಚಿವ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವರು. ರಾಜ್ಯಪಾಲರ ಭಾಷಣ ಕುರಿತು ಚರ್ಚೆ ನಂತರ ಜು. 7 ರ ಶುಕ್ರವಾರ ಬಜೆಟ್ ಮಂಡನೆ ಮಾಡಲಾಗುವುದು ಎಂದರು.

ಇನ್ನು ಬಜೆಟ್ ವಿಚಾರವಾಗಿ ಪೂರ್ವಭಾವಿ ಸಭೆಗಳು ನಡೆದಿಲ್ಲ. ‌ಹಾಗಾಗಿ ಈಗಲೇ ಬಜೆಟ್ ಗಾತ್ರದ ಬಗ್ಗೆ ನಿಖರವಾಗಿ ಹೇಳಲಾಗುವುದಿಲ್ಲ. ಬಿಜೆಪಿ ಸರ್ಕಾರ ಚುನಾವಣಾ ಪೂರ್ವದಲ್ಲಿ 2.43 ಲಕ್ಷ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News