Thursday, April 25, 2024
Homeಸುದ್ದಿಉಚಿತ ಬಸ್ ಪ್ರಯಾಣ; ಮಹಿಳೆಯರಿಗೆ 'ಶಕ್ತಿ ಸ್ಮಾರ್ಟ್ ಕಾರ್ಡ್' ಕಡ್ಡಾಯ

ಉಚಿತ ಬಸ್ ಪ್ರಯಾಣ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಕಡ್ಡಾಯ

ಬೆಂಗಳೂರು, ಜೂ. 06: ಜೂನ್ 11 ರಿಂದ ಜಾರಿಗೆ ಬರಲಿರುವ ಶಕ್ತಿ ಯೋಜನೆಯಡಿ ಕೆಎಸ್ಆರ್ಟಿಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’ ಹೊಂದುವುದು ಕಡ್ಡಾಯವಾಗಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶಕ್ತಿ ಸ್ಮಾರ್ಟ್‌ಕಾರ್ಡ್‌ ವಿತರಿಸುವವರೆಗೆ ಆಧಾರ್ ಕಾರ್ಡ್/ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಇಲಾಖೆ/ ಸರ್ಕಾರಿ ಸ್ವಾಮ್ಯದ ಕಛೇರಿಗಳು ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಯಾವುದೇ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್‌ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ.

ರಾಜ್ಯದ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News