Wednesday, April 24, 2024
Homeಸುದ್ದಿರಾಜ್ಯವಿಪಕ್ಷ ನಾಯಕ ಆಯ್ಕೆಗಿಂದು ಮಹತ್ವದ ಸಭೆ ; ಯಾರಾಗಲಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ..!??

ವಿಪಕ್ಷ ನಾಯಕ ಆಯ್ಕೆಗಿಂದು ಮಹತ್ವದ ಸಭೆ ; ಯಾರಾಗಲಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ..!??

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಬಿಜೆಪಿಯೂ ಇಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸರಣಿ ಸಭೆ ಕರೆದಿದೆ. ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದು, ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.


ದಯನೀಯ ಸೋಲಿನಿಂದ ಕಂಗೆಟ್ಟ ಬಿಜೆಪಿ ಪ್ರತಿಪಕ್ಷದ ನಾಯಕನ ಆಯ್ಕೆಗೂ ತಿಣುಕಾಡುತ್ತಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಬಿಜೆಪಿ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಯಾರಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಒಟ್ಟಾರೆ ಇಂದಿನ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದ್ದು ಅದಕ್ಕೂ ಮುನ್ನ ತೆರವಾಗಿರುವ ಸ್ಥಾನವನ್ನು ಬಿಜೆಪಿ ತುಂಬುವ ನಿರೀಕ್ಷೆ ಇದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News