Sunday, September 8, 2024
Homeಸುದ್ದಿಕರಾವಳಿಗೃಹಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ : ಡೆತ್ ನೋಟ್ ಪತ್ತೆ...!!!

ಗೃಹಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ : ಡೆತ್ ನೋಟ್ ಪತ್ತೆ…!!!

ಮಂಗಳೂರು : ಹೊಸ ಮನೆ ಖರೀದಿಸಿ ಅದರ ಗೃಹ ಪ್ರವೇಶದಲ್ಲಿ ಖುಷಿಯಲ್ಲಿರಬೇಕಾದ ಯುವತಿಯೊಬ್ಬಳು ಇದೀಗ ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.


ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ(25) ಆತ್ಮ ಹತ್ಯೆಗೈದ ಯುವತಿ.

ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಒಂದೂವರೆ ತಿಂಗ ಹಿಂದೆ ಊರಿಗೆ ಬಂದಿದ್ದಳು, ಬಳಿಕ ಮನೆಯೊಂದನ್ನು ಖರೀದಿಸಿ ಜೂನ್ 3 ರಂದು ಗೃಹ ಪ್ರವೇಶ ಮಾಡಿದ್ದಳು, ಆದರೆ ಈ ಹೊಸೆ ಮನೆಯೇ ಆಕೆಯ ಬಾಳಿಗೆ ಸಂಕಷ್ಟ ತಂದೊಡ್ಡಿದೆ. ಆತ್ಮಹತ್ಯೆಗೂ ಮುನ್ನ ಆಕೆ ಬರೆದಿದ್ದ 24 ಪುಟಗಳ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು, ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.

ಹಲವು ಸಂಕಷ್ಟಗೊಳಗಾದ ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News