Monday, April 22, 2024
Homeಸುದ್ದಿರಾಜ್ಯಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದ ಕಾಂಗ್ರೆಸ್ ವಿರುದ್ದ ಕೇಂದ್ರ ಸಚಿವೆ ಗರಂ..!!!

ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದ ಕಾಂಗ್ರೆಸ್ ವಿರುದ್ದ ಕೇಂದ್ರ ಸಚಿವೆ ಗರಂ..!!!

ಚಿಕ್ಕಮಗಳೂರು : ಸರಕಾರಿ ಬಸ್ಸಿನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆ ವಿರುದ್ದ ಇದೀಗ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹೆಣ್ಮಕ್ಕಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ‌. ಪ್ರವಾಸ ಮಾಡಬಹುದು‌, ಬೇರೆ ಕಡೆ ಹೋಗಬಹುದು.ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತದೆ, ಇದಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದಿದ್ದಾರೆ.

ಇನ್ನು ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News