Saturday, July 27, 2024
Homeಸುದ್ದಿಕರಾವಳಿಮಹಿಳೆಯರ ಉಚಿತ ಬಸ್ ಪ್ರಯಾಣದ 'ಶಕ್ತಿ ಯೋಜನೆ'ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮಹಿಳೆಯರ ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.

ಶಕ್ತಿ ಯೋಜನೆಯ ಲೋಗೋ, ಸ್ಟಿಕರ್ ಹಾಗೂ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.ಈ ವೇಳೆ ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಯಿತು.

ಇನ್ನು ಇಂದಿನಿಂದ ಸರ್ಕಾರಿ ಸಾರಿಗೆ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ರಾಜ್ಯದ ಮೂಲೆ-ಮೂಲೆಗಳಲ್ಲಿ ಪ್ರಯಾಣಿಸಬಹುದು. ಆದರೆ ಯಾವುದಾದರು ಗುರುತಿನ ಚೀಟಿ ಇರಲೇ ಬೇಕು.

ಫ್ರೀ ಬಸ್ ಪಾಸ್ಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಇದಕ್ಕೆ ಮೂರು ತಿಂಗಳು ಸಮಯ ನೀಡಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News