ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ; ತಾತ್ಕಾಲಿಕ ಗುಡಿಯಲ್ಲಿ ಮಾರಿಯಮ್ಮ ದೇವಿ, ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು 35 ಕೋಟಿ ರೂ. ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಯಲ್ಲಿ ಜೂ.12ರ ಸೋಮವಾರ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ ಹಾಗೂ ನಿರ್ಮಾಣ ಹಂತದ ಶಿಲಾಮಯ ಗರ್ಭಗುಡಿಯ ಮಹಾದ್ವಾರ ಸ್ಥಾಪನಾ ಪೂಜೆ ನಡೆಯಿತು.

ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ ಮತ್ತು ವಿವಿಧ ಉಪಸಮಿತಿಗಳು ಹಾಗೂ ಎಲ್ಲಾ ಸಮಾಜಗಳ ಮುಖಂಡರ ಉಪಸ್ಥಿತಿಯಲ್ಲಿ ದೇಗುಲದ ತಂತ್ರಿಗಳಾದ ಜ್ಯೋರ್ತಿವಿದ್ವಾನ್ ಕೆ. ಪಿ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ, ಜ್ಯೋರ್ತಿವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ|ಮೂ| ಶ್ರೀನಿವಾಸ ತಂತ್ರಿ ಕಲ್ಯ ಅವರ ನೇತೃತ್ವದಲ್ಲಿ ಸಾನಿಧ್ಯ ಚಲನೆ ಮತ್ತು ಸಾನಿಧ್ಯ ಪ್ರತಿಷ್ಠೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

Scroll to Top