ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂ.15 ರಂದು ಮಿನಿ ಉದ್ಯೋಗ ಮೇಳ

ಉಡುಪಿ, ಜೂ.12: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 15 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿ೦ಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ

ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯುಮ್/ ಸಿವಿ ಹಾಗೂ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You cannot copy content from Baravanige News

Scroll to Top