Saturday, July 27, 2024
Homeಸುದ್ದಿಅನ್ನಭಾಗ್ಯ ಅಕ್ಕಿ ಕೇಂದ್ರ ಪೂರೈಸುತ್ತಿಲ್ಲ: ಅಸಮಾಧಾನ ತೋಡಿಕೊಂಡ ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯ ಅಕ್ಕಿ ಕೇಂದ್ರ ಪೂರೈಸುತ್ತಿಲ್ಲ: ಅಸಮಾಧಾನ ತೋಡಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ. 15: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಸರಕಾರ ನೀಡಿದ ಭರವಸೆಯಂತೆ ಜುಲೈ 1 ರಿಂದ ಜಾರಿಯಾಗಬೇಕು. ಆದರೆ, ಯೋಜನೆ ಜುಲೈ ತಿಂಗಳಲ್ಲಿ ಜಾರಿಯಾಗುವುದು ಅನುಮಾನ ಎನ್ನಲಾಗುತ್ತಿದೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 5 ಗ್ಯಾರಂಟಿಗಳ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಲ್ಲಿ ಅನ್ನಾಭಾಗ್ಯ ಯೋಜನೆಯೂ ಒಂದು. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ ಎಂದರು.

ಬಿಪಿಎಲ್, ಅಂತ್ಯೋದಯ ಕಾರ್ಡ್​ನವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ. ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ. ಇದಕ್ಕಾಗಿ ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್​ ಟನ್ ಹೆಚ್ಚುವರಿ​ ಅಕ್ಕಿ ಬೇಕು ಎಂದು ಸಿಎಂ ತಿಳಿಸಿದರು.

ಅನ್ನಭಾಗ್ಯ ಯೋಜನೆಗಾಗಿ ತಿಂಗಳಿಗೆ 840 ಕೋಟಿ ರೂ. ವೆಚ್ಚ ಆಗಲಿದೆ. ಪ್ರತಿ ವರ್ಷಕ್ಕೆ 10,092 ಕೋಟಿ ರೂ. ಬೇಕು. ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಭಾರತೀಯ ಆಹಾರ ನಿಗಮ(ಎಫ್ ಸಿಐ) ಡೆಪ್ಯುಟಿ ಮ್ಯಾನೇಜರ್​ ಜೊತೆ ಚರ್ಚೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಡೆಪ್ಯುಟಿ ಮ್ಯಾನೇಜರ್ ಜೂನ್ 12 ರಂದು ತಮಗೆ ಪತ್ರ ಬರೆದು ಹೆಚ್ಚುವರಿ ಅಕ್ಕಿ ಕೊಡುವುದಾಗಿ ತಿಳಿಸಿದ್ದರು. ಇದಾದ ಬಳಿಕ ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದು, ಅಕ್ಕಿ ಸಂಗ್ರಹ ಇದ್ದರೂ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ. ಡೆಪ್ಯುಟಿ ಮ್ಯಾನೇಜರ್​ 7 ಲಕ್ಷ ಟನ್​ ಅಕ್ಕಿ ಸಂಗ್ರಹ ಇದೆ ಎಂದಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಯಾಕೆ ಪೂರೈಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News