ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಜೂ 15: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ವಿವಾದಿತ ಎಪಿಎಂಸಿ ಕಾಯ್ದೆ ರದ್ದು ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ ಎಂದು ಸಭೆ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಎಚ್​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ಸಂಪುಟ ಸಭೆಯ ಇತರ ಪ್ರಮುಖ ನಿರ್ಧಾರಗಳಿವು:

ಎಪಿಎಂಸಿ ಕಾನೂನು ಹಿಂಪಡೆಯಲು ನಿರ್ಧಾರ

KPSC ಸದಸ್ಯರ ನೇಮಕಾತಿಗೆ ಮುಖ್ಯಮಂತ್ರಿಗೆ ಪರಮಾಧಿಕಾರ

ಹೈಕೋರ್ಟ್‌ ಆಡಳಿತಾತ್ಮಕ ವೆಚ್ಚ ಹೆಚ್ಚಿಸಲು ತೀರ್ಮಾನ

ಬೆಂಗಳೂರಿನಲ್ಲಿ ಟೆಕ್‌ ಸಮ್ಮಿಟ್‌ ಆಯೋಜನೆಗೆ ನಿರ್ಧಾರ

₹17.98 ಕೋಟಿ ಬಿಡುಗಡೆಗೆ ಅನುಮತಿ

ವೃಷಭಾವತಿ ವ್ಯಾಲಿ ಯೋಜನೆ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ

ಬೆಂಗಳೂರು, ತುಮಕೂರು ಜಿಲ್ಲೆಗೆ ನೀರು ಪೂರೈಕೆ

ಸುಮಾರು 80 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಸ್ತು

You cannot copy content from Baravanige News

Scroll to Top