ಬೆಂಗಳೂರು, ಜೂ 18: ಜುಲೈ 1ರಿಂದ ಜಾರಿಯಾಗಲಿರುವ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಸೇವಾ ಸಿಂಧು ಪೋರ್ಟಲ್ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಹಾಗಾಗಿ ಇಂದಿನಿಂದ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವ ಕ್ರಮ:
ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, https://sevasindhugss.karnataka.gov.in ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್ ಕಚೇರಿಗಳಲ್ಲಿ ನೋಂದಾಯಿಸಬಹುದು. ಆಧಾರ್ ಕಾರ್ಡ್, ಆರ್ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಇತ್ತೀಚಿಗೆ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಸರ್ಕಾರ ತಿಳಿಸಿತ್ತು. ಆದರೆ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಿತ್ತು. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿತ್ತು.