Saturday, July 27, 2024
Homeಸುದ್ದಿಕರಾವಳಿವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ : ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನೆ

ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ : ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನೆ

ಉಡುಪಿ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಧ್ಯಾರ್ಥಿನಿ ನಿಕಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ.


ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರು ಸಮೀಪದ ಕೆಮ್ಮುಂಡೇಲಿನ‌ ನಿವಾಸಿ ನಿಕಿತಾ ಆನಾರೋಗ್ಯದಿಂದ ಚಿಕಿತ್ಸೆಗಾಗಿ ಉಡುಪಿ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ನಿಕಿತಾ ಚಿಕಿತ್ಸೆ ಫಲಕಾರಿಯಾಗದೇ ಕಳೆದ ಭಾನುವಾರ ಸಾವನಪ್ಪಿದ್ದರು. ಇನ್ನು ವಿಧ್ಯಾರ್ಥಿನಿ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದರು.


ಇದೀಗ ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ- ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ನಡೆಸಿದ್ದು, ಸಿಟಿ ಹಾಸ್ಪಿಟಲ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳನ್ನು ಪೊಲೀಸರು ರಸ್ತೆಯಲ್ಲೇ ತಡೆದು ನಿಲ್ಲಿಸಿದ್ದು, ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News