Monday, May 27, 2024
Homeಸುದ್ದಿಮಣಿಪಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮಣಿಪಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಉಡುಪಿ, ಜೂ.26: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಮೋದ್‌ ಅಂಗಾರ ಜತ್ತನ್‌ (41) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರಿನ ಕಂಪೆನಿಯೊಂದರಲ್ಲಿ ಅಕೌಂಟ್ಸ್‌ ಮ್ಯಾನೇಜರ್‌ ಆಗಿ ಕೆಲಸ ಮಾಡಿಕೊಂಡಿದ್ದ ಅವರು, ಪ್ರಸ್ತುತ ವರ್ಕ್‌ ಪ್ರಮ್‌ ಹೋಮ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು.

ಆದರೆ ಪ್ರಮೋದ್‌ ಅಂಗಾರ ಜತ್ತನ್‌ ಅವರು ಕಚೇರಿ ಕೆಲಸದ ಒತ್ತಡದಿಂದಲೋ ಅಥವಾ ಬೇರೆ ಯಾವುದೋ ಕಾರಣದಿಂದಲೋ ಜೀವನದಲ್ಲಿ ಜುಗುಪ್ಪೆಗೊಂಡು ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಪತ್ನಿ ನೀಡಿದ ದೂರಿನಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News