Sunday, October 1, 2023
Homeಸುದ್ದಿರಾಜ್ಯ5 ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

5 ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶಾದ್ಯಂತ 5 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಒಂದೇ ಸಮಯದಲ್ಲಿ ಹಸಿರು ನಿಶಾನೆ ತೋರಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಮೋದಿ ಬೆಳಗ್ಗೆ 11 ಗಂಟೆಗೆ ಹೊಸ 5 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.

ರಾಣಿ ಕಮಲಾಪತಿ-ಜಬಲ್‌ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಹಾಗೂ ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ ಎಂಬ 5 ರೈಲುಗಳಿಗೆ ಮೋದಿ ಚಾಲನೆ ನೀಡಿದ್ದಾರೆ.

ಈ ರೈಲುಗಳು ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಗೋವಾ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಪ್ರಧಾನಿ ಮೋದಿ ಸೋಮವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ರಾಜ್ಯಪಾಲ ಮಂಗುಭಾಯ್ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೋದಿ ಇಂದು ಚಾಲನೆ ನೀಡಿರುವ 5 ರೈಲುಗಳು ಸೇರಿ 24 ವಂದೇ ಭಾರತ್ ರೈಲುಗಳು ದೇಶಾದ್ಯಂತ ಸಂಚರಿಸುತ್ತಿವೆ. ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್, ಕರ್ನಾಟಕಕ್ಕೆ 2ನೇ ವಂದೇ ಭಾರತ್ ರೈಲಾಗಿದೆ.

ಧಾರವಾಡದ ರೈಲ್ವೆ ನಿಲ್ದಾಣದಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ, ಮೇಯರ್ ವೀಣಾ ಬರದ್ವಾಡ, ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ ಕಿಶೋರ್ ಸೇರಿ ಹಲವರು ಭಾಗಿಯಾಗಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News