Saturday, July 20, 2024
Homeಸುದ್ದಿನೈತಿಕ ಹೊಣೆ ಹೊತ್ತು ಕಟೀಲ್‌ ರಾಜೀನಾಮೆ ನೀಡಬೇಕು - ರೇಣುಕಾಚಾರ್ಯ

ನೈತಿಕ ಹೊಣೆ ಹೊತ್ತು ಕಟೀಲ್‌ ರಾಜೀನಾಮೆ ನೀಡಬೇಕು – ರೇಣುಕಾಚಾರ್ಯ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು ಎಂದು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ..!!?
ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು.

ಬಿಜೆಪಿ ಪಕ್ಷವನ್ನು ಹಗಲು ರಾತ್ರಿ ಕಟ್ಟಿದ ಹಿರಿಯರಾದ ಯಡಿಯೂರಪ್ಪ, ದಿ. ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ನವರದ್ದು ಬಹುದೊಡ್ಡ ಪಾತ್ರವಿದೆ. ಅಂಥವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು.

ಭಾರತೀಯ ಜನತಾ ಪಕ್ಷ ನನಗೆ ತಾಯಿ ಸಮಾನ. ನನಗೆ ಎಲ್ಲಾ ಸ್ಥಾನ ಮಾನ ನೀಡಿರುವುದು ಬಿಜೆಪಿ. ಪಕ್ಷಕ್ಕೆ ಹೀನಾಯ ಸೋಲಾದಾಗ ನಾವೆಲ್ಲರೂ ಸತ್ಯಸಂಗತಿಗಳ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಲೇಬೇಕು. ಜನತಾ ನ್ಯಾಯಾಲಯದಲ್ಲಿ ಜನರು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತೆಲೆಬಾಗಲೇಬೇಕು. ಅದೇ ಜನಸಾಮಾನ್ಯರು ತಿಳಿಸಿದ ಅಭಿಪ್ರಾಯವನ್ನು ನಾನು ತಿಳಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News