Monday, May 27, 2024
Homeಸುದ್ದಿರಾಜ್ಯಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ಇಂದು ತೆರೆ: ಅವರ ಬಿಟ್ಟು, ಇವರ ಬಿಟ್ಟು, ಮತ್ಯಾರು?

ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ಇಂದು ತೆರೆ: ಅವರ ಬಿಟ್ಟು, ಇವರ ಬಿಟ್ಟು, ಮತ್ಯಾರು?

ಬೆಂಗಳೂರು : ಈಗಾಗಲೇ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ನಿನ್ನೆ(ಜುಲೈ 03) ರಾಜ್ಯ ಪಾಲರು ಭಾಷಣ ಮಾಡಿದ್ದಾರೆ. ಆದ್ರೆ, ಅಧಿವೇಶನ ಆರಂಭವಾದ್ರೂ, ಬಿಜೆಪಿಯಲ್ಲಿ ವಿಪಕ್ಷ ನಾಯಕ ಯಾರು ಎನ್ನುವುದೇ ಇನ್ನೂ ನಿಗೂಢವಾಗಿದೆ. ಇದು ಬಿಜೆಪಿಗೆ ತೀವ್ರ ಇರಿಸುಮುರಿಸು ಉಂಟುಮಾಡಿದ್ದು, ಅಧಿವೇಶದನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ನ್ನ ಇಕ್ಕಟ್ಟಿನಲ್ಲಿ ಸಿಲುಕಿಸಬೇಕಾದ ಬಿಜೆಪಿಯೇ ಈಗ ಸಂಕಷ್ಟಕ್ಕೆ ಸಿಲುಕಿದ್ದು, ಇಂದು (ಜುಲೈ 04) ವಿರೋಧ ಪಕ್ಷದ ನಾಯಕನ ಆಯ್ಕೆಯಾಗುವ ಸಾಧ್ಯತೆಗಳಿವೆ.

ಆದ್ರೆ, ಯಾರಿಗೆ ವಿಪಕ್ಷ ನಾಯಕನ ಪಟ್ಟ ಎನ್ನುವುದು ಇನ್ನೂ ನಿಗೂಢವಾಗಿದೆ.

ಇಂದು ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಇನ್ನು ಹೈಕಮಾಂಡ್ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಲು ವೀಕ್ಷಕರನ್ನು ನೇಮಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಾಯಕನ ಆಯ್ಕೆ ಮಾಡಲು ಕೇಂದ್ರೀಯ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ನೇಮಿಸಿದ್ದಾರೆ. ಅವರು ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಇಂದು (ಜುಲೈ 04) ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ಬೆಳಗ್ಗೆ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ಗೆ ಮಾಹಿತಿ ನೀಡಲಿದ್ದಾರೆ. ಬಳಿಕ ಅಧಿಕೃತವಾಗಿ ವಿರೋಧ ಪಕ್ಷ ನಾಯಕನ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬಿಜೆಪಿ ಹೈಕಮಾಂಡ್, ವಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ, ಲಿಂಗಾಯತೇತರ ನಾಯಕರನ್ನು ನೇಮಿಸಿದ್ರೆ ಹೇಗೆ ಎನ್ನುವ ಲೆಕ್ಕಾಚಾರಗಳನ್ನು ಹಾಕಿದೆ. ಲಿಂಗಾಯತ ಸಮುದಾಯದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ರೇಸ್ನಲ್ಲಿದ್ದಾರೆ. ಅಲ್ಲದೇ ಶಾಸಕ ಸುನಿಲ್ ಕುಮಾರ್ ಕೂಡ ವಿಪಕ್ಷ ನಾಯಕನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆದ್ರೆ ಯಾರಿಗೆ ವಿಪಕ್ಷ ನಾಯಕನ ಪಟ್ಟ ಎನ್ನುವುದು ಇನ್ನೂ ನಿಗೂಢವಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News