Thursday, September 28, 2023
Homeಸುದ್ದಿಉಡುಪಿ: ಅಗತ್ಯ ಇದ್ದಲ್ಲಿ ಮಾತ್ರ ಶಾಲೆಗಳಿಗೆ ರಜೆ ನೀಡಿ; ತಹಶೀಲ್ದಾರ್ ಗೆ ಡಿಸಿ ಸೂಚನೆ

ಉಡುಪಿ: ಅಗತ್ಯ ಇದ್ದಲ್ಲಿ ಮಾತ್ರ ಶಾಲೆಗಳಿಗೆ ರಜೆ ನೀಡಿ; ತಹಶೀಲ್ದಾರ್ ಗೆ ಡಿಸಿ ಸೂಚನೆ

ಉಡುಪಿ, ಜು.4: ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಹವಮಾನ ಇಲಾಖೆಯಿಂದ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು ಪರಿಸ್ಥಿತಿಯನ್ನು ಆಧರಿಸಿ ಅವಶ್ಯವಿರುವ ಕಡೆಗಳಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಅವಶ್ಯವೆನಿಸಿದ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸುವ ಕುರಿತು ಕ್ರಮವಹಿಸುವಂತೆ ತಾಲೂಕು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ – ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ. ದುರ್ಬಲ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನೆರೆ ಪೀಡಿತರಾಗಿದ್ದು, ಬರುವುದು ಕಷ್ಟಸಾಧ್ಯ ಎನ್ನುವ ಸಂದರ್ಭಗಳಲ್ಲಿ ಸ್ಥಳೀಯವಾಗಿ ರಜೆಯನ್ನು ಘೋಷಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶವಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತ ತಿಳಿಸಿದೆ. ಮಕ್ಕಳ ಪೋಷಕರು/ಶಾಲಾ ಮುಖ್ಯಸ್ಮರ, ಮಕ್ಕಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ಮಕ್ಕಳು ಶಾಲೆಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಶಾಲೆಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 1077, 0820-2574802 ಬಳಕೆ ಮಾಡುವಂತೆ ಸೂಚಿಸಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News