Monday, April 29, 2024
Homeಸುದ್ದಿಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ, ಯುವಾ ಬ್ರಿಗೇಡ್ ಕಾರ್ಯಕರ್ತನ ಕೊಲೆ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ, ಯುವಾ ಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು, ಜು.10: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ ಕಾರ್ಯಕರ್ತ ಕೊಲೆಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ವೇಣುಗೋಪಾಲ್ ನಾಯಕ್​ (32) ಮೃತ ಯುವಾ ಬ್ರಿಗೇಡ್ ಕಾರ್ಯಕರ್ತ.

ಮೃತ ಕಾರ್ಯಕರ್ತ ಟಿ.ನರಸೀಪುರದ ಶ್ರೀರಾಂಪುರ ಕಾಲೋನಿ ನಿವಾಸಿಯಾಗುದ್ದು, ನಿನ್ನೆ (ಜು.09) ಹನುಮ ಜಯಂತಿ ವೇಳೆ ಗುಂಪುಗಳ ನಡುವೆ ವಾಗ್ವಾದ ಆಗಿತ್ತು. ವಾಗ್ವಾದ ತಾರಕಕ್ಕೆ ಏರಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಟಿ.ನರಸೀಪುರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್​​ಪಿ ಗೋವಿಂದರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿ.ನರಸೀಪುರ ಠಾಣೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಟಿ.ನರಸೀಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಮುಂದೆ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. ಅಲ್ಲದೇ ಆಸ್ಪತ್ರೆಗೆ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿ ಮೃತ ಯುವಕನ ಅಂತಿಮ ದರ್ಶನ ಪಡೆದರು. ಬಳಿಕ ಮೃತ ಯುವಕನ ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News