ಕೊಲ್ಲೂರು, ಜು 12: ಕೊಲ್ಲೂರು ಅರಣ್ಯ ಪ್ರದೇಶದಲ್ಲಿಅಲೆದಾಡುತ್ತಿದ್ದ ಕೇರಳ ಮೂಲದ ಅಪರಿಚಿತ ಯುವತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯರು ಮತ್ತು ಪೊಲೀಸರ ಸಹಕಾರದಿಂದ ರಕ್ಷಿಸಿ ಮಂಜೇಶ್ವರದ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಸ್ನೇಹಾಲಯದಿಂದ ರಕ್ಷಿಸಿ ದಾಖಲಿಸಿದ್ದಾರೆ.
ಯುವತಿ ತನ್ನ ಹೆಸರನ್ನು ಅರ್ಚನಾ (28) ಕೇರಳದ ಚರ್ವತ್ಕಲ್ ನಿವಾಸಿ ಎಂಬ ಅಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.
ಕೊಲ್ಲೂರಿನ ಸಲಗೇರಿ ಬಳಿ ಅರಣ್ಯದಲ್ಲಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು. ಹಾಗೂ ರಿಕ್ಷಾ ಚಾಲಕರು ಕೊಲ್ಲೂರು ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ರಕ್ಷಣೆ ಕಾರ್ಯ ನಡೆಸಲಾಯಿತು. ಯುವತಿ ಬಗ್ಗೆ ಮಾಹಿತಿ ಇದ್ದಲ್ಲಿ ವಾರಸುದಾರರು ಕೊಲ್ಲೂರು ಠಾಣೆ ಅಥವಾ ಮಂಜೇಶ್ವರದ ಸ್ನೇಹಾಲಯವನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.