Saturday, July 27, 2024
Homeಸುದ್ದಿಕರಾವಳಿಉಡುಪಿ: ಕೂರ್ಮರಾವ್ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

ಉಡುಪಿ: ಕೂರ್ಮರಾವ್ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

ಉಡುಪಿ : ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.

ಕೂರ್ಮರಾವ್ ಅವರಿಗೆ ಸರಕಾರ ಸ್ಥಳವನ್ನು ಗುರುತಿಸಿಲ್ಲ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News