Saturday, June 15, 2024
Homeಸುದ್ದಿಕೇಂದ್ರ ಸರಕಾರಕ್ಕೆ 9 ವರ್ಷ- ಕಾರ್ಯಕ್ರಮದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಸರಕಾರಕ್ಕೆ 9 ವರ್ಷ- ಕಾರ್ಯಕ್ರಮದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್

ಉಡುಪಿ, ಜು.14: ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಗುರುವಾರ ರಾತ್ರಿ ಉಡುಪಿಗೆ ಆಗಮಿಸಿದರು.

ಇಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ.ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಡುಪಿಯ ಪ್ರವಾಸಿ ಬಂಗಲೆಯಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News