Saturday, July 27, 2024
Homeಸುದ್ದಿಕರಾವಳಿಉಡುಪಿ : ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅಧಿಕಾರ ಸ್ವೀಕಾರ

ಉಡುಪಿ : ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅಧಿಕಾರ ಸ್ವೀಕಾರ

ಉಡುಪಿ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು, ಜು.14ರಂದು ಅವರು ಅಧಿಕಾರ ಸ್ವೀಕರಿಸಿದ್ದಾರೆ.



ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ನೂತನ ಜಿಲ್ಲಾಧಿಕಾರಿಯವರನ್ನು ಬರಮಾಡಿಕೊಂಡು ಅಧಿಕಾರವನ್ನು ಹಸ್ತಾಂತರಿಸಿದ್ದಾರೆ.

ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.



ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಸೆಪ್ಟೆಂಬರ್ 2021ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News