Tuesday, April 16, 2024
Homeಸುದ್ದಿದ.ಕ. ಜಿಲ್ಲೆ ಪ್ರವೇಶಿಸದಂತೆ ಮುತಾಲಿಕ್‌ಗೆ ಹೇರಿದ್ದ ನಿರ್ಬಂಧ ರದ್ದು : ಮುತಾಲಿಕ್ ದ. ಕ ಭೇಟಿ

ದ.ಕ. ಜಿಲ್ಲೆ ಪ್ರವೇಶಿಸದಂತೆ ಮುತಾಲಿಕ್‌ಗೆ ಹೇರಿದ್ದ ನಿರ್ಬಂಧ ರದ್ದು : ಮುತಾಲಿಕ್ ದ. ಕ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ಗೆ ಜಿಲ್ಲಾಡಳಿತ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ| ಎಂ.ನಾಗಪ್ರಸನ್ನ ಅವರಿದ್ದ ಪೀಠವು, ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ವರ್ಗಾವಣೆ ಮಾಡಿದ್ದು, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿದೆ. ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಆದೇಶದ ಅವಧಿ ಈಗಾಗಲೇ ಮುಗಿದಿದ್ದು, ವಿಚಾರಣೆಗೆ ಮಾನ್ಯತೆ ಕಳೆದುಕೊಂಡಿರುವುದಾಗಿ ತಿಳಿಸಿದೆ.

ಇದೇ ಹಿನ್ನೆಲೆಯಲ್ಲಿ ಮುತಾಲಿಕ್ ದ. ಕ ಜಿಲ್ಲೆಯ ಪುತ್ತೂರು, ಮಂಗಳೂರಿಗೆ ಭೇಟಿಯನ್ನೂ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News