Monday, May 27, 2024
Homeಸುದ್ದಿಕರಾವಳಿವೇಶ್ಯಾವಾಟಿಕೆ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ

ವೇಶ್ಯಾವಾಟಿಕೆ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ

ಮಣಿಪಾಲ : ಮನೆಯಲ್ಲಿ ಹಲವಾರು ವರ್ಷಗಳಿಂದ ರಾಜಾರೋಷವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಧಂದೆಯ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ಮಣಿಪಾಲ ಪೊಲೀಸರು ಬಲೆ ಬೀಸಿದ್ದಾರೆ.

ನಿನ್ನೆ ರಾತ್ರಿ ಪೊಲೀಸ್ ದಾಳಿ ಸಂದರ್ಭ ಪೊಲೀಸರ ಕೈಯಿಂದ ತಪ್ಪಿಸಿಕೊಂಡನೇ ಅಥವಾ ಆತನಿಗೆ ಮೊದಲೇ ಮಾಹಿತಿ‌ ಸೋರಿಕೆ ಆಗಿತ್ತಾ ಎಂಬ ಸಂಶಯ ಸ್ಥಳೀಯ ನಿವಾಸಿಗಳು ವ್ಯಕ್ತಪಡಿಸಿದ್ದಾರೆ.

ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 5 ಮಂದಿ ಯುವತಿಯರ ರಕ್ಷಣೆ ಮಾಡಲಾಗಿದೆ. ಯುವತಿಯರಲ್ಲಿ 3 ಜನ ಬೆಂಗಳೂರು ಮೂಲದ ನಿವಾಸಿಗಳಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್‌ ಹಾಗೂ ಮುಂಬೈ ವಾಸಿಗಳಾಗಿದ್ದು, ಅವರನ್ನು ರಕ್ಷಿಸಲಾಯಿತು.

ಕಳೆದ ರಾತ್ರಿ ಬ್ರಹ್ಮಾವರ ಇನ್ಸ್ಪೆಕ್ಟರ್ ದಿವಾಕರ್ ಅವರಿಗೆ ಬಂದ ಖಚಿತ ಮಾಹಿತಿಯಂತೆ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಗೆ ದಾಳಿ ನಡೆಸಿ ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಸಲಾಮತ್‌ ಹಾಗೂ ಚಂದ್ರಹಾಸ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದವರಲ್ಲಿ 4 ಮೊಬೈಲ್‌ ಪೋನ್‌, 10000 ರೂ ನಗದು, ಕಾಂಡಮ್‌ಗಳು, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News