ಉಡುಪಿ: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವು; ದೃಶ್ಯ ಮೊಬೈಲ್ ನಲ್ಲಿ ಸೆರೆ

ಉಡುಪಿ, ಜು.24: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ.

ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ.

ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ.

ಯುವಕ ಜಲಪಾತದಲ್ಲಿ ಬೀಳುತ್ತಿರುವ ದ್ರಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.

ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿತ್ತಿದೆ.

ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.

ಕೊಲ್ಲೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Scroll to Top