Tuesday, July 23, 2024
Homeಸುದ್ದಿಕರಾವಳಿಮುಡಿಪು : ಬಸ್ಸು-ಕಾರು ಮಧ್ಯೆ ಭೀಕರ ಅಪಘಾತ..!!

ಮುಡಿಪು : ಬಸ್ಸು-ಕಾರು ಮಧ್ಯೆ ಭೀಕರ ಅಪಘಾತ..!!

ಉಳ್ಳಾಲ : ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ.

ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಮಂಗಳೂರಿನಿಂದ ಬಿ.ಸಿರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಬಸ್ ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ‌.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News