Saturday, July 27, 2024
Homeಸುದ್ದಿನಿರಂತರ ಮಳೆ ಹಿನ್ನೆಲೆ; ದಕ ಜಿಲ್ಲೆಯಾದ್ಯಂತ ನಾಳೆ (ಜು.26) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!!!

ನಿರಂತರ ಮಳೆ ಹಿನ್ನೆಲೆ; ದಕ ಜಿಲ್ಲೆಯಾದ್ಯಂತ ನಾಳೆ (ಜು.26) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!!!

ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 26 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ.

ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ.

ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ ಗಳು, ನದಿಗಳು ಹಾಗೂ ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News