Wednesday, April 24, 2024
Homeಸುದ್ದಿಕರಾವಳಿಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ – ಯಶ್‌ಪಾಲ್ ಸುವರ್ಣ

ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ – ಯಶ್‌ಪಾಲ್ ಸುವರ್ಣ

ಉಡುಪಿ : ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಕ್ರರಣ ಸಂಬಂಧ ರಾಜ್ಯ ಬಿಜೆಪಿ ನಾಯಕರು ಉಡುಪಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಕ್ಕಳಾಟ ಎಂದಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ಘಟಕ ಇಂದು (ಜು.28) ಕಡಿಯಾಳಿ ಬಿಜೆಪಿ ಕಛೇರಿಯಿಂದ ಎಸ್ಪಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತು. ಈ ವೇಳೆ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಿಸ್ಟೇಕ್ ಆಗಿ ಕ್ಯಾಮೆರಾ ಬಂತು ಅಂತಾ ಹೇಳಿದ್ದಾರೆ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ. ನಿನ್ನೆ ಖುಷ್ಬೂ ಅಕ್ಕನಿಗೆ ಸ್ವಲ್ಪ ಗಡಿಬಿಡಿಯಾಗಿದೆ. ಅವರು ಹಿಡನ್ ಕ್ಯಾಮೆರಾ ಇರಲಿಲ್ಲ ಅಂತ ಹೇಳಿದರು. ನಾವು ಹಿಡನ್ ಕ್ಯಾಮೆರಾ ಇತ್ತು ಅಂತಾ ಹೇಳಿಲ್ಲ. ಅವರಿಗೆ ಮಾಹಿತಿ ನೀಡಿದವರು ತಪ್ಪು ಮಾಹಿತಿ ನೀಡಿದ್ದಾರೆ. ಹಿಂದೂ ಸಂಘಟನೆಗಳು 25 ವರ್ಷಗಳಿಂದ ಜಿಹಾದಿ ನೆಟ್ವರ್ಕ್ ಬಗ್ಗೆ ಹೇಳುತ್ತಿದೆ. ಈಗ ನಾವು ಹೇಳಿದ ಮಾತುಗಳೆಲ್ಲ ನಿಜವಾಗಿದೆ. ಉಡುಪಿ ಮೊಬೈಲ್ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಬೇಕು. ಎನ್ಐಎ ಈ ಪ್ರಕರಣವನ್ನು ಬಯಲಿಗೆಳೆಯಲಿದೆ ಎಂದು ಒತ್ತಾಯಿಸಿದರು.

ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ. ಪೊಲೀಸ್ ವರಿಷ್ಠರ ಕೈ ಕಟ್ಟಿ ಹಾಕಿರೋದು ದೃಢ ಆಗಿದೆ. ಹೆಣ್ಣುಮಕ್ಕಳು ತಲೆ ತಗ್ಗಿಸುವ ಪ್ರಕರಣ ನಡೆದಿದೆ ಅಂದರೇ ಪೊಲೀಸ್ ವರಿಷ್ಠರ ನೇತೃತ್ವದಲ್ಲಿ ತನಿಖೆ ನಡೆಸಬೇಕಿತ್ತು. ಮಹಿಳೆಯರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಬಹಳ ದಿನ ಈ ಘಟನೆ ಮುಚ್ಚಿಡಲು ಸಾಧ್ಯವಿಲ್ಲ. ಹೆಣ್ಣುಮಕ್ಕಳನ್ನು ಯಾರಾದರೂ ಬಳಸಿಕೊಂಡಿರಬಹುದು. ಲವ್ ಜಿಹಾದ್ ಅಥವಾ ಬೇರೆ ಜಿಹಾದ್‌ಗೆ ಬಳಕೆ ಮಾಡಿಕೊಂಡಿರಬಹುದು. ಇದರ ಕೂಲಂಕುಷ ತನಿಖೆ ಆಗಬೇಕು. ಎನ್ಐಎ ತನಿಖೆ ಕೂಡ ನಡೆಯೋದು ಉತ್ತಮ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇನ್ನು ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ,ಕಿರಣ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಭಾಗಿಯಾಗಿದ್ದರು. ಹಾಗೇ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News