ಉಡುಪಿ ವಿಡಿಯೋ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೋಮುಗಲಭೆ ಮಾಡಲು ಪ್ರಯತ್ನಿಸುತ್ತಿದೆ: ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆರೋಪ!

ಉಡುಪಿ ವಿಡಿಯೋ ಪ್ರಕರಣವನ್ನು ಪೋಲಿಸರು ಸಮರ್ಥವಾಗಿ ನಿಭಾಯಿಸಿದ್ದರೂ ಬಿಜೆಪಿ ಕೋಮುಗಲಭೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆರೋಪಿಸಿದರು.


ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರು ತಮ್ಮ ಕೆಲಸ ಮಾಡುತ್ತಿರುವಾಗ ಮಧ್ಯದಲ್ಲಿ ಅವರಿಗೆ ತೊಂದರೆ ಕೊಡುವ ಕೆಲಸ ನಡೆಯುತ್ತಿದೆ. ಸದ್ಯ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸರನ್ನು ನೇಮಕ ಮಾಡಿದ್ದು ಹಿಂದಿನ ಬಿಜೆಪಿ ಸರಕಾರ. ಆದರೂ ಅವರ ಮೇಲೆ ನಂಬಿಕೆ ಇಲ್ಲದಾಗಿದೆ ಎಂದರು.


ಶಾಸಕ ಯಶ್ಪಾಲ್ ಸುವರ್ಣ ಅವರು ಕಾಂಗ್ರೆಸ್ ಪಕ್ಷದ ನಾಯಕರ ವೈಯುಕ್ತಿಕ ವಿಚಾರ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.

You cannot copy content from Baravanige News

Scroll to Top