ಉಡುಪಿ, ಆ.3: ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ಸಿದ್ಧರಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ನ ಕನ್ನಡದ ಪ್ರಾಂತೀಯ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಇಂದು ಉಡುಪಿಯಲ್ಲಿ ನಡೆದ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಪ್ರಕರಣದ ಬಗ್ಗೆ ಉಲ್ಲೇಖಿಸಿದರು.
ಪ್ರಾಚೀನ ಹಿಂದೂ ಸಂಸ್ಕೃತಿಯನ್ನು ನಾಶಮಾಡಲು ಜಿಹಾದಿ ರಾಕ್ಷಸಿಯರು ಬಂದಿದ್ದಾರೆ. ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಸಂಚು ಹೂಡಲಾಗಿದೆ. ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡುತ್ತೇವೆ. ಇಂತಹ ದಾಳಿಗಳು ಇಂದೇ ಕೊನೆಗೊಳ್ಳಬೇಕು. ಹಿಂದೂ ತಾಯಂದಿರು ಎಚ್ಚೆತ್ತುಕೊಳ್ಳಬೇಕು ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಜಿಲ್ಲೆಯ ಹಿಂದೂ ಮಹಿಳೆಯರಿಗೆ ಅನ್ಯಾಯವಾಗುವುದನ್ನು ಕಂಡಾಗ ಮಚ್ಚು, ಕತ್ತಿ ಹಿಡಿಯಬೇಕು. ಪೊರಕೆ ಹಿಡಿದ ಕೈಯಲ್ಲಿ ಆಯುಧವನ್ನು ಹಿಡಿದುಕೊಳ್ಳಿ. ನಾವು ಮೌನವಾಗಿ ಕುಳಿತುಕೊಳ್ಳುವುದಿಲ್ಲ ಎಂದು ಅವರಿಗೆ ಎಚ್ಚರಿಕೆ ನೀಡಬೇಕು. ಈ ಮುಸ್ಲಿಮರು ಹಿಂದೂ ಯುವತಿಯರನ್ನು ಮತ್ತು ನಮ್ಮ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಮಂಡಳಿ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.