ಬ್ರಹ್ಮಾವರ: ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಉದ್ಘಾಟನೆ

ಉಡುಪಿ, ಆ.05: ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ಸಂಚಾರಿ ಪೀಠವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಇಂದು ಉದ್ಘಾಟಿಸಿದರು.

ಈ ವೇಳೆ ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್.ಕೆ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಉಡುಪಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎಂ.ಐ.ಅರುಣ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.

You cannot copy content from Baravanige News

Scroll to Top