ಕುತ್ಯಾರು ಶಾಲೆಗೆ ಸಂಪೂರ್ಣ ಸುಕನ್ಯಾ ಸಮೃದ್ಧಿ ಶಾಲೆ ಪ್ರಮಾಣಪತ್ರ

ಶಿರ್ವ, ಆ.07: ಪ್ರಧಾನ ಮಂತ್ರಿಯವರ ಬೇಟಿ ಬಚಾವೋ-ಬೇಟಿ ಪಡಾವೋ ಕಾರ್ಯಕ್ರಮದಡಿ ಕರ್ನಾಟಕ ಅಂಚೆ ವೃತ್ತದ ಚೀಪ್ ಪೋಸ್ಟ್ ಮಾಸ್ಟರ್ ಜನರಲ್ ಅವರ ಆದೇಶದಂತೆ ಅಂಚೆ ಇಲಾಖೆಯ ಉಡುಪಿ ದಕ್ಷಿಣ ಉಪ ವಿಭಾಗದವರು ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಕುತ್ಯಾರು ಹಿಂದೂ ವಿದ್ಯಾದಾಯಿನಿ ಹಿ.ಪ್ರಾ. ಶಾಲೆಯನ್ನು ಸಂಪೂರ್ಣ ಸುಕನ್ಯಾ ಸಮೃದ್ಧಿ ಶಾಲೆ ಎಂದು ಘೋಷಿಸಿ ಪ್ರಮಾಣಪತ್ರ ನೀಡಿ ಗೌರವಿಸಿದ್ದಾರೆ.

ಅಂಚೆ ಇಲಾಖೆಯ ಅಧಿಕಾರಿಗಳು ಶಾಲೆಯ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ದಿನೇಶ್ ಕುಲಾಲ್,ಮುಖ್ಯಶಿಕ್ಷಕಿ ಶರ್ಮಿಳಾ ಭಂಡಾರಿ, ಶಿಕ್ಷಕ ವೃಂದ, ಮಕ್ಕಳ ಹೆತ್ತವರು, ಗ್ರಾಮಸ್ಥರು ಮತ್ತು ಸಮಿತಿಯ ಸದಸ್ಯರನ್ನು ಅಭಿನಂದಿಸಿದ್ದಾರೆ.

You cannot copy content from Baravanige News

Scroll to Top