ತಿರುವನಂತಪುರಂ, ಆ.10: ಕೇರಳ ಹೆಸರು ಬದಲಾವಣೆಗೆ ರಾಜ್ಯ ಸರಕಾರ ಮುಂದಾಗಿದೆ. ಈ ಕುರಿತು ಕೇರಳ ರಾಜ್ಯ ವಿಧಾನಸಭೆ ಅವಿರೋಧವಾಗಿ ನಿರ್ಣಯ ಕೈಗೊಂಡಿದ್ದು, ರಾಜ್ಯವನ್ನು ಇನ್ನು ಮುಂದೆ ಕೇರಳಂ ಎಂದು ಕರೆಯಲಾಗುತ್ತದೆ.

ಕೇರಳದ ಹೆಸರನ್ನು ಕೇರಳಂ ಎಂದು ಅಧಿಕೃತವಾಗಿ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು. ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಸೇರಿಸಲಾದ ಎಲ್ಲಾ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸಲು ಕೇಂದ್ರವನ್ನು ಒತ್ತಾಯಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ನಿರ್ಣಯವನ್ನು ಮಂಡಿಸಿದರು.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ವಿರೋಧ ಪಕ್ಷವು ಯಾವುದೇ ತಿದ್ದುಪಡಿಗಳನ್ನು ಅಥವಾ ಮಾರ್ಪಾಡುಗಳನ್ನು ಸೂಚಿಸದೆ ಈ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ. ನಿರ್ಣಯದ ಪರವಾಗಿ ಎಲ್ಲ ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತ ಚಲಾಯಿಸಿದರು ಎಂದು ಸ್ಪೀಕರ್ ಎ ಎನ್ ಶಂಶೀರ್ ಹೇಳಿದರು.