Saturday, July 20, 2024
Homeಸುದ್ದಿರಾಜ್ಯಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಸಿಸಿಬಿ

ಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಸಿಸಿಬಿ

ಬೆಂಗಳೂರು : ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಥ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ರಾಜ್ಯದ 11 ಪೊಲೀಸ್‌ ಠಾಣೆಗಳಲ್ಲಿ ಪುನೀತ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಪುನೀತ್‌ ಅಪರಾಧ ಪ್ರಕರಣದಲ್ಲಿ ಪದೇ ಪದೇ ಭಾಗಿಯಾಗುತ್ತಿರುವ ಹಿನ್ನಲೆ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಹಾಸನ ಜಿಲ್ಲೆಯ ಅಲೂರು ತಾಲೂಕಿನ ಕೆರೆಹಳ್ಳಿಯ ಪುನೀತ್‌ ಜೆ.ಪಿ.ನಗರದ7ನೇ ಹಂತದಲ್ಲಿ ವಾಸವಾಗಿದ್ದ .ಈತ ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ ಎನ್ನಲಾಗುತ್ತಿದೆ. ಎಲ್ಲ ಪ್ರಕರಣದ ಕುರಿತು ವರದಿ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News