Wednesday, April 24, 2024
Homeಸುದ್ದಿ'ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ' - ಸಿಎಂ

‘ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ’ – ಸಿಎಂ

ಅಥಣಿ, ಆ 12: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿ ಕುಟುಂಬಕ್ಕೆ ಮಾಸಿಕ ಐದು ಸಾವಿರ ರೂ. ಲಭಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರ್ಕಾರದ ಆದಾಯ ಕೂಡ ಹೆಚ್ಚಾಗಲಿದೆ ಎಂದರು.

ಇನ್ನು ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದ್ದು, ಈ ಯೋಜನೆಗೆ ವರ್ಷಕ್ಕೆ 35 ಸಾವಿರ ಕೋಟಿ ರೂ. ವಿನಿಯೋಗಿಸಲಾಗುತ್ತಿದ್ದು ಆ.27ರಂದು ಬೆಳಗಾವಿಯಲ್ಲೇ ಚಾಲನೆ ನೀಡಲಾಗುವುದು ಎಂದಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News