ಉಡುಪಿ, ಆ.15: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 77 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆಯಿತು.
ಸಂಘದ ಮಾಜಿ ಅಧ್ಯಕ್ಷ ಅಲೆವೂರು ದಿನೇಶ್ ಕಿಣಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ವಾರ್ತಾಧಿಕಾರಿ ಮಂಜುನಾಥ ಬಿ., ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ವಾರ್ತಾ ಸಹಾಯಕ ಶಿವಕುಮಾರ್ ಬಿ., ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ, ಪತ್ರಕರ್ತರಾದ ಶಶಿಧರ್ ಮಸ್ತಿಬೈಲು, ಮೈಕಲ್ ರೋಡಿಗ್ರಸ್, ಪರೀಕ್ಷಿತ್ ಶೇಟ್, ಹರೀಶ್ ಕುಂದರ್, ಅಶ್ವಥ್ ಆಚಾರ್ಯ, ರಿಚರ್ಡ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.