ಕುತ್ಯಾರು: ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ  ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಾಲಾ ಶೈಕ್ಷಣಿಕ ಪರಿಕರ ವಿತರಣಾ ಕಾರ್ಯಕ್ರಮ

ಕುತ್ಯಾರು, ಆ.15: ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ  ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಾಲಾ ಶೈಕ್ಷಣಿಕ ಪರಿಕರ ವಿತರಣೆ ಕಾರ್ಯಕ್ರಮ ಇಂದು ಜರುಗಿತು.

ಶಾಲಾಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು ಧ್ವಜಾರೋಹಣ ನೆರವೇರಿಸಿದರು.

ಈ ಸಂಧರ್ಭದಲ್ಲಿ ಅದಾನಿ ಫೌಂಡೇಶನ್ ವತಿಯಿಂದ ಸಂಸ್ಥೆಯ ಮಕ್ಕಳಿಗಾಗಿ ಶಾಲಾ ಶೈಕ್ಷಣಿಕ ಪರಿಕರ ವಿತರಣಾ ಕಾರ್ಯಕ್ರಮವು ನಡೆಯಿತು.

ಈ ವೇಳೆ ಸಂಸ್ಥೆಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಕಾರ್ಯದರ್ಶಿಯಾದ ಗುರುರಾಜ್ ಆಚಾರ್ಯ, ಶೈಕ್ಷಣಿಕ ಸಲಹೆಗಾರರಾದ ದಿವಾಕರ್ ಆಚಾರ್ಯ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ ಜರಗಿತು.

ಪ್ರಾಂಶುಪಾಲೆ ಶ್ರೀಮತಿ ಸಂಗೀತಾ ಸ್ವಾಗತಿಸಿದರು. ಶಿಕ್ಷಕಿ ಅನಿತಾ  ಕಾರ್ಯಕ್ರಮವನ್ನು ನಿರೂಪಿಸಿ, ಶಿಕ್ಷಕಿ ಶಾರೋನ್ ವಂದಿಸಿದರು.

You cannot copy content from Baravanige News

Scroll to Top