ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದ ಬಳಿಯಿರುವ ಹುತಾತ್ಮರ ಸ್ಮಾರಕಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ನಮನ ಸಲ್ಲಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.