Thursday, April 25, 2024
Homeಸುದ್ದಿಶಿರ್ವ: ಶಿರ್ವ ಗ್ರಾಮ ಪಂಚಾಯಿತಿಯ 2022-23ನೇ ಸಾಲಿನ ಪ್ರಥಮ ಗ್ರಾಮಸಭೆ

ಶಿರ್ವ: ಶಿರ್ವ ಗ್ರಾಮ ಪಂಚಾಯಿತಿಯ 2022-23ನೇ ಸಾಲಿನ ಪ್ರಥಮ ಗ್ರಾಮಸಭೆ

ಶಿರ್ವ: ಶಿರ್ವ ಗ್ರಾಮ ಪಂಚಾಯಿತಿಯ 2022-23ನೇ ಸಾಲಿನ ಪ್ರಥಮ ಗ್ರಾಮಸಭೆ ಅ. 11 ಮಂಗಳವಾರದಂದು ಗಣೇಶೋತ್ಸವ ವೇದಿಕೆ ಬಳಿಯ ಮಹಿಳಾ ಸೌಧದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಪಂಚಾಯತ್‌ ರಾಜ್ ಅಧಿನಿಯಮ 1993ರ ಪ್ರಕರಣ 3ರ ಅನ್ವಯ ಶಿರ್ವ ಗ್ರಾಮ ಪಂಚಾಯತಿನ 2022-23ನೇ ಸಾಲಿನ ಪ್ರಥಮ ವಾರ್ಡ್‌ ಸಭೆಗಳು ಮತ್ತು ಗ್ರಾಮ ಸಭೆ ಜರಗಲಿದ್ದು ಆಯಾ ದಿನಾಂಕಗಳಂದು ಆಯಾ ವಾರ್ಡಿಗಳ ಜನಪ್ರತಿನಿಧಿಗಳು ಹಾಗೂ ಮಾಜಿ ಸದಸ್ಯರುಗಳು, ನೋಡಲ್ ಅಧಿಕಾರಿಗಳು ಹಾಗೂ ಗ್ರಾಮ ಮಟ್ಟದ ವಿವಿಧ ಇಲಾಕಾಧಿಕಾರಿಗಳು ವಾರ್ಡು ಸಭೆಗಳಲ್ಲಿ ಹಾಜರಿರುವಂತೆ ಕೋರಲಾಗಿದೆ. ಈ ಗ್ರಾಮಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ. ಮತದಾರರು ವಾರ್ಡ್ ಸಭೆಗಳಲ್ಲಿ ಮತ್ತು ಗ್ರಾಮ ಸಭೆಯಲ್ಲಿ ಭಾಗವಹಿಸಿ, ವಿವಿಧ ಯೋಜನೆಯ ಫಲಾನುಭವಿಗಳ ಆಯ್ಕೆ ಹಾಗೂ ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಸೂಕ್ತ ಸಲಹೆ ಸೂಚನೆಗಳನ್ನಿತ್ತು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ಕೋರಲಾಗಿದೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್, ಅಧ್ಯಕ್ಷರು ರತನ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗ್ರೇಸಿ ಕರ್ಡೋಜ, ಗ್ರಾ. ಪಂ. ನೋಡಲ್ ಅಧಿಕಾರಿ ಡಾ ಅರುಣ್ ಕುಮಾರ್ ಹೆಗ್ಡೆ ಹಾಗೂ ಸರ್ವ ಸದಸ್ಯರು ಗ್ರಾಮಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News