Saturday, June 15, 2024
Homeಸುದ್ದಿಕರಾವಳಿಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ : ಶಾಸಕ...

ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಉಡುಪಿ : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರ ಇದರ ಆಶ್ರಯದಲ್ಲಿ ಇಂದು ದಿನಾಂಕ 16-08-2023 ರಂದು ಸರಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರದಲ್ಲಿ ಆಯೋಜಿಸಲಾದ ಉಡುಪಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ “ಕುಸ್ತಿ ಪಂದ್ಯಾಟ”ವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರುಪಮಾ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಪೇಂದ್ರ ನಾಯಕ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಸತ್ಯೇಂದ್ರ ನಾಯಕ್ ಆತ್ರಾಡಿ, ಜಿಲ್ಲಾ ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿಗಳಾದ ಪ್ಲೋಸಿ ಫೆರ್ನಾಂಡಿಸ್, ಗೋಪಾಲ್ ಶೆಟ್ಟಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ರಿತೇಶ್ ಶೆಟ್ಟಿ, ಉಡುಪಿ ತಾಲೂಕು ದೈ.ಶಿ.ಶಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಉಪಾಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ ಹಾಗೂ ಸುಭಾಷ್ ಸಂಕಲ್ಕರ್ ಸುಭಾಷ್ ಚಂದ್ರ ಹೆಗ್ಡೆ, ಎಸ್.ಎಸ್. ಪ್ರಸಾದ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಬಾಲಕೃಷ್ಣ ಪಿ ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News