Saturday, July 27, 2024
Homeಸುದ್ದಿರೇಷನ್ ಕಾರ್ಡ್ ತಿದ್ದುಪಡಿ ಆರಂಭ; ಇಲ್ಲಿದೆ ಸಂಪೂರ್ಣ ಮಾಹಿತಿ

ರೇಷನ್ ಕಾರ್ಡ್ ತಿದ್ದುಪಡಿ ಆರಂಭ; ಇಲ್ಲಿದೆ ಸಂಪೂರ್ಣ ಮಾಹಿತಿ

ನೀವು ನಿಮ್ಮ ರೇಷನ್‌ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಬೇಕಾ..? ಅಥವಾ ನಿಮ್ಮ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡಬೇಕಾ? ಹಾಗಿದ್ದರೆ ನಿಮಗೆ ಗುಡ್‌ ನ್ಯೂಸ್‌ ಇದೆ.

ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆಯಲು ನೀವು ಪ್ರಯತ್ನ ಮಾಡುತ್ತಿದ್ದೀರಿ ಆದರೆ ಹಲವು ದಿನಗಳಿಂದ ಸ್ಥಗಿತವಾಗಿದ್ದ ಪಡಿರತ ಚೀಟಿ ತಿದ್ದುಪಡಿ ಹಾಗೂ ಹೆಸರು ಸೇರ್ಪಡೆ ಪ್ರಕ್ರೀಯೆ ಆರಂಭವಾಗಿದೆ.

ರೇಷನ್‌ ಕಾರ್ಡ್‌ ತಿದ್ದುಪಡಿ ಮತ್ತು ಸೇರ್ಪಡೆಯನ್ನು ಕರ್ನಾಟಕ ಸಾರ್ವತ್ರಿಕ ಚುನಾವಣೆ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು, ಇದರಿಂದಾಗಿ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಆಗದಂತಾಗಿತ್ತು.

ಕುಟುಂದ ಸದಸ್ಯರ ಹೆಸರು ಸೇರ್ಪಡೆ (Ration Card Update Karnataka) ಆಗದ ಕಾರಣ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವ ಆರೋಗ್ಯ ಸೌಲಭ್ಯದಿಂದ ವಂಚಿತರಾಗಿದ್ದರು. ಇದನ್ನು ಅರಿತು ಸರ್ಕಾರ ತಿದ್ದುಪಡಿ ಹಾಗೂ ಹೆಚ್ಚುವರಿ ಸದಸ್ಯರ ಹೆಸರು ಸೇರ್ಪಡೆಗೆ ಅನುಮೊದನೆ ನೀಡಿದೆ.

“ಪ್ರಸ್ತುತ ಪಡಿತರ ಚೀಟಿಯಲ್ಲಿ ಫಲಾನುಭವಿಗಳ ಮಾಹಿತಿಯ ತಿಮ್ಮಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ” ಎಂದು ಸರ್ಕಾರದ ಕಾರ್ಯದರ್ಶಿಗಳು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಅಗತ್ಯ ದಾಖಲೆಗಳೊಂದಿಗೆ ರೇಷನ್‌ ಕಾರ್ಡ್‌ತಿದ್ದುಪಡಿ ಮತ್ತು ಸದಸ್ಯರನ್ನು ಸೇರ್ಪಡೆ ಮಾಡಬಹುದು. ಹಾಗೂ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬಹುದು.

✴️ರೇಷನ್‌ ಕಾರ್ಡ್‌ನಲ್ಲಿ ಈ ತಿದ್ದುಪಡಿ ಮಾಡಬಹುದು

✴️ಹೊಸ ಸದ್ಯಸರ ಸೇರ್ಪಡೆ ಹಾಗೂ ತೆಗೆದು ಹಾಕುವುದು

✴️ಹೆಸರು ಮತ್ತು ಇತರೆ ಮಾಹಿತಿ ತಿದ್ದುಪಡಿ

✴️ಕುಟುಂಬ ಮುಖ್ಯಸ್ಥರ ಬದಲಾವಣೆ

ಕೇವಲ ನಾಲ್ಕು ದಿನ ಅವಕಾಶ: ರೇಷನ್‌ ಕಾರ್ಡ್‌ನಲ್ಲಿ ತಿದ್ದುಪಡಿ ಮತ್ತು ಸದಸ್ಯರ ಸೇರ್ಪಡೆಗಾಗಿ ಕೇವಲ ನಾಲ್ಕು ದಿನ ಅವಕಾಶ ನೀಡಲಾಗಿದ್ದು, 16-08-2023 ರಿಂದ 19-08-2023 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ತಿದ್ದುಪಡಿ ಪ್ರಕ್ರೀಯೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

Ration Card Correction ಮಾಡುವುದು ಹೇಗೆ? ಸಾರ್ವಜನಿಕರಿಗೆ ಆನ್‌ಲೈನ್‌ ನಲ್ಲಿ ತಿದ್ದುಪಡಿ ಮಾಡಲು ಅವಕಾಶ ಇರುವುದಿಲ್ಲ, ನಿಮ್ಮ ಹತ್ತಿರದ ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌, CSC ಕೇಂದ್ರ ಅಥವಾ ಸರ್ಕಾರ ಅನುಮೊದಿಸಿರುವ ಆನ್‌ಲೈನ್‌ ಕೇಂದ್ರಗಳಿಗೆ ಭೇಟಿ ನೀಡಿ ತಿದ್ದುಪಡಿ ಮಾಡಿಸಬಹುದು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News