ನಟ ಉಪೇಂದ್ರಗೆ ರಿಲೀಫ್: ಎರಡನೇ FIRಗೂ ತಡೆ ನೀಡಿದ ಹೈಕೋರ್ಟ್



ಬೆಂಗಳೂರು : ಜಾತಿ ನಿಂದನೆ ಪದ ಬಳಸಿದ ಆರೋಪವನ್ನು ಎದುರಿಸುತ್ತಿದ್ದ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಮೊದಲ ಎಫ್ ಐಆರ್ ಗೆ ಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್ ಐಆರ್ ಗೆ ಕೋರ್ಟ್ ತಡೆ ಕೊಟ್ಟಿದೆ.

ಕಳೆದ ವಾರ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದರು. ಈ ವೇಳೆ ಉಪೇಂದ್ರ ಆಕ್ಷೇಪಾರ್ಹ ಪದಬಳಕೆ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಕೇಸ್ ದಾಖಲಾಯಿತು.

ಅದೇ ರೀತಿ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಕೂಡ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

Scroll to Top