Saturday, July 20, 2024
Homeಸುದ್ದಿರಾಜ್ಯKSRTCಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ

KSRTCಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ

ಬೆಂಗಳೂರು : ಸಿಂಗಾಪುರದ World Sustainability Congress ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿದೆ.ಗುರುವಾರ ಸಿಂಗಾಪುರದಲ್ಲಿ World Sustainability Congress ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ವಿಲ್ಬರ್ ಎನ್.ಜಿ., ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಪೈಡ್ ಪ್ರೋಫೆಶನಲ್ ಅಕೌಂಟೆಂಟ್ಸ್ ಹಾಗೂ ಅಟಾರ್ನಿ ಕರೀನ ಲೆನೋರ್ ಎಸ್. ಬಯೋನ್, ಚೀಫ್ ಎನ್ವೈರ್ಮೆಂಟ್, ಸೋಷಿಯಲ್ ಮತ್ತು ಗೌರ್ನನ್ಸ್ ಅಫೀಸರ್, ಕಂಪ್ಲಯನ್ಸ್ ಮತ್ತು ಡಾಟಾ ಪ್ರೈವೆಸಿ ಅಧಿಕಾರಿಯಿಂದ ನಿಗಮದ ಪರವಾಗಿ ಮುಖ್ಯ ಲೆಕ್ಕಾಧಿಕಾರಿ ಮಂಜುಳ ನಾಯ್ಕ್, ಮುಖ್ಯ ಲೆಕ್ಕಾಧಿಕಾರಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್. ಪ್ರಶಸ್ತಿ ಸ್ವೀಕರಿಸಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News