Saturday, May 4, 2024
Homeಸುದ್ದಿನಿಯಂತ್ರಣ ತಪ್ಪಿ ಅಂಬುಲೆನ್ಸ್ ಪಲ್ಟಿ; ಚಾಲಕ ಮೃತ್ಯು

ನಿಯಂತ್ರಣ ತಪ್ಪಿ ಅಂಬುಲೆನ್ಸ್ ಪಲ್ಟಿ; ಚಾಲಕ ಮೃತ್ಯು

ಬಂಟ್ವಾಳ, ಆ.18: ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅಂಬುಲೆನ್ಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಬಳಿ ನಡೆದಿದೆ.

ಮೃತ ಅಂಬುಲೆನ್ಸ್ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News