Tuesday, June 18, 2024
Homeಸುದ್ದಿಉಡುಪಿ: ಪತ್ರಕರ್ತರ ಸಂಘದ ಫೋಟೋಗ್ರಫಿ ಕಾರ್ಯಾಗಾರ ಉದ್ಘಾಟನೆ

ಉಡುಪಿ: ಪತ್ರಕರ್ತರ ಸಂಘದ ಫೋಟೋಗ್ರಫಿ ಕಾರ್ಯಾಗಾರ ಉದ್ಘಾಟನೆ

ಉಡುಪಿ, ಆ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಇದರ ಸಹಯೋಗದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಉಡುಪಿ ನಾಯರ್‌ಕೆರೆಯ ಐಎಂಎ ಭವನದಲ್ಲಿ ಆಯೋಜಿಸಲಾದ ಫೋಟೋಗ್ರಫಿ ಕಾರ್ಯಾಗಾರವನ್ನು ಎಸ್ಪಿ ಅಕ್ಷಯ್ ಮಚ್ಚೀಂದ್ರ ಉದ್ಘಾಟಿಸಿದರು.

ಛಾಯಾಚಿತ್ರ ಪ್ರದರ್ಶನಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಅಧ್ಯಕ್ಷ ಜನಾರ್ದನ ಕೊಡವೂರು ಚಾಲನೆ ನೀಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸಿದ್ದರು.

ಉದಯವಾಣಿಯ ಛಾಯಾಚಿತ್ರ ಪತ್ರಕರ್ತ ಅಸ್ಟ್ರೋ ಮೋಹನ್, ಮಂಗಳೂರು ವಿಜಯ ಕರ್ನಾಟಕ ಹಿರಿಯ ಉಪಸಂಪಾದಕ ಸುಶೀಲೇಂದ್ರ ಕುಡುಪಾಡಿ, ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News