Wednesday, September 18, 2024
Homeಸುದ್ದಿರಾಜ್ಯ ಸರಕಾರದಿಂದ ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬದ ಗಿಫ್ಟ್

ರಾಜ್ಯ ಸರಕಾರದಿಂದ ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬದ ಗಿಫ್ಟ್

ಬೆಂಗಳೂರು, ಆ 22: ಆಗಸ್ಟ್ 25ರಂದು ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಬರುವ ಮಹಿಳೆಯರಿಗೆ ಅರಿಶಿನ ಮತ್ತು ಕುಂಕುಮ ನೀಡಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ಆ ಮೂಲಕ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗಿಫ್ಟ್ ನೀಡಲು ಮುಂದಾಗಿದೆ.

ನಾಡಿನ ಸಮಸ್ತ ಮಹಿಳೆಯರನ್ನು ಗೌರವಿಸುವ ಸಲುವಾಗಿ ಹಾಗೂ ಶ್ರೀ ವರ ಮಹಾಲಕ್ಷ್ಮೀ ಕೃಪಾಕಟಾಕ್ಷವು ಲಭಿಸಲೆಂದು ಈ ದಿನದಂದು ಅಧಿಸೂಚಿತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡುವಂತೆ ಆದೇಶಿಸಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News