ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿ ಯುವಕನಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವನ್ನಪ್ಪಿದ್ದಾಳೆ.
ವಿಟ್ಲದ ಅಳಿಕೆ ನಿವಾಸಿ ಗೌರಿ(18) ಮೃತ ಯುವತಿ.
ಕೊಲೆ ಮಾಡಿದ ಆರೋಪಿ ಪದ್ಮರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇರಿತಕ್ಕೊಳಗಾದ ನ ಯುವತಿ ಗೌರಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಕೆ ಅಷ್ಟರಲ್ಲಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.